ಮೂಳೂರು ಸಮೀಪ ಸರಣಿ ಅಪಘಾತ: ನಾಲ್ಕು ವಾಹನಗಳು ಜಖಂ

Update: 2019-05-16 08:12 GMT

ಕಾಪು, ಮೇ 16: ಇಲ್ಲಿಗೆ ಸಮೀಪದ ಮುಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ 11ಗಂಟೆ ಸುಮಾರಿಗೆ ನಾಲ್ಕು ವಾಹನಗಳ ಮಧ್ಯೆ ಅಪಘಾತ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ಮಂಗಳೂರು ಕಡೆಯಿಂದ ಉಡುಪಿ ಕಡೆ ಹೋಗುತ್ತಿದ್ದ ರಿಕ್ಷಾಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಓಮ್ನಿ ಕಾರು ಢಿಕ್ಕಿ ಹೊಡೆಯಿತು. ಇದರ ಪರಿಣಾಮ ರಿಕ್ಷಾದ ಹಿಂಬದಿಯಲ್ಲಿ ಬರುತ್ತಿದ್ದ ಇನ್ನೊಂದು ರಿಕ್ಷಾ ಹಾಗೂ ಕಾರು ಕೂಡ ಢಿಕ್ಕಿ ಹೊಡೆಯಿತೆಂದು ತಿಳಿದುಬಂದಿದೆ.

ಅಪಘಾತದಿಂದ ರಿಕ್ಷಾ ಚಾಲಕ ಗಾಯಗೊಂಡಿದ್ದು, ನಾಲ್ಕೂ ವಾಹನಗಳು ಕೂಡ ಜಖಂಗೊಂಡಿವೆ. ಸ್ಥಳಕ್ಕೆ ಆಗಮಿಸಿರುವ ಕಾಪು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News