ವ್ಯಕ್ತಿಯ ಗುಂಡಿಕ್ಕಿ ಹತ್ಯೆ: ಜಮ್ಮುವಿನಲ್ಲಿ ಭಾರಿ ಪ್ರತಿಭಟನೆ, ಕರ್ಫ್ಯೂ

Update: 2019-05-16 11:07 GMT

ಜಮ್ಮು, ಮೇ 16: ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದ ಘಟನೆಯ ನಂತರ ಜಮ್ಮು ಮತ್ತು ಕಾಶ್ಮೀರದ ಭದೇರ್ವಾಹ್ ನಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು, ಕರ್ಫ್ಯೂ ವಿಧಿಸಲಾಗಿದೆ.

ಯಾವ ಕಾರಣಕ್ಕಾಗಿ ಗುಂಡಿಕ್ಕಲಾಗಿದೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದು, ಮೃತ ವ್ಯಕ್ತಿಯ ಸಂಬಂಧಿಕರು ಇದು ಗೋರಕ್ಷಕರ ಕೃತ್ಯ ಎಂದಿದ್ದಾರೆ. ಮೃತ ವ್ಯಕ್ತಿಯನ್ನು ನಯೀಮ್ ಎಂದು ಗುರುತಿಸಲಾಗಿದೆ.

ಘಟನೆ ನಡೆದ ನಂತರ ಪ್ರತಿಭಟನಕಾರರು ಬದೇರ್ವಾಹ್ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ ಎಂದು ವರದಿಯಾಗಿದೆ.

“ಚತೇರ್ ಗಲದಿಂದ ಆಗಮಿಸುತ್ತಿದ್ದ ನಯೀಮ್ ರನ್ನು ನಲ್ತಿ ಸಮೀಪ ಗುಂಡಿಕ್ಕಿ ಹತ್ಯೆಗೈಯಲಾಗಿದ್ದು, ಮತ್ತೊಬ್ಬ ವ್ಯಕ್ತಿಗೆ ಗುಂಡಿನ ದಾಳಿಯಲ್ಲಿ ಗಾಯಗಳಾಗಿವೆ” ಎಂದು ಪೊಲೀಸ್ ಅಧಿಕಾರಿ ಎಂ.ಕೆ.ಸಿನ್ಹಾ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News