ವಿದ್ಯುತ್ ದರ ಏರಿಕೆಗೆ ಕೆಇಆರ್‌ಸಿ ಸಕಲ ಸಿದ್ಧತೆ

Update: 2019-05-16 12:31 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 16: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ರಾಜ್ಯದ ಜನತೆಗೆ ವಿದ್ಯುತ್ ಶಾಕ್ ನೀಡಲು ಕೆಇಆರ್‌ಸಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜೂ.1ರಿಂದ ವಿದ್ಯುತ್ ದರ ಹೆಚ್ಚಳವಾಗುವ ಸಾಧ್ಯತೆಯಿದೆ.

ಕಳೆದ ಸಾಲಿನ ನವೆಂಬರ್‌ನಲ್ಲಿ ವಿದ್ಯುತ್ ದರ ಪರಿಷ್ಕರಿಸುವಂತೆ ಕೋರಿ ವಿದ್ಯುತ್ ಸರಬರಾಜು ಕಂಪೆನಿಗಳು ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿದ್ದವು. ಪ್ರತಿ ಯೂನಿಟ್‌ಗೆ 45-50 ಪೈಸೆಗಳಷ್ಟು ವಿದ್ಯುತ್ ದರ ಹೆಚ್ಚಿಸುವಂತೆ ವಿದ್ಯುತ್ ಸರಬರಾಜು ಕಂಪೆನಿಗಳು ಮನವಿ ಮಾಡಿದ್ದವು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿದ್ಯುತ್ ದರ ಏರಿಕೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒಪ್ಪಿಗೆ ನೀಡಿರಲಿಲ್ಲ. ಇದೀಗ, ಮತ್ತೊಮ್ಮೆ ಕೆಇಆರ್‌ಸಿ ವಿದ್ಯುತ್ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿದ್ಯುತ್ ಸರಬರಾಜು ಕಂಪೆನಿಗಳು ಸಲ್ಲಿಸಿರುವ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News