ಮೇ 18ರಂದು ಅಖಿಲ ಭಾರತ ವಚನ ಸಾಹಿತ್ಯ- ಸಾಂಸ್ಕೃತಿಕ ಸಮ್ಮೇಳನ

Update: 2019-05-16 14:57 GMT

ಉಡುಪಿ, ಮೇ 16: ಬೆಂಗಳೂರಿನ ಜ್ಞಾನಮಂದಾರ ಅಕಾಡೆಮಿ, ಮುಂಬೈ ರಾಧಾಕೃಷ್ಣ ಅಕಾಡೆಮಿ ಮತ್ತು ಭ್ರಾಮರಿ ಯಕ್ಷನೃತ್ಯ ಕಲಾ ನಿಲಯ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ 8ನೆ ಅಖಿಲ ಭಾರತ ಕನ್ನಡ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನವನ್ನು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಮೇ 18ರಂದು ಬೆಳಗ್ಗೆ 10:30ಕ್ಕೆ ಆಯೋಜಿಸಲಾಗಿದೆ.

ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿದುಷಿ ಅಮಿತಾ ಜತಿನ್ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದ್ದು ಮುಂಬಯಿ, ಬೆಂಗಳೂರು ಮತ್ತು ನಾಡಿನ ಪ್ರತಿಭಾನ್ವಿತ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯ ಕ್ರಮಗಳು ಜರಗಲಿವೆ. ಕವಿಗೋಷ್ಢಿ, ವಿಚಾರ ಗೋಷ್ಠಿಗಳು ನಡೆಯಲಿವೆ. ರಾಜ್ಯ-ಹೊರರಾಜ್ಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ನಡೆಯಲಿದೆ.

ಸಮಾರೋಪ ಸಮಾರಂಭದಲ್ಲಿ ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಭಾಗವಹಿಸಲಿದ್ದಾರೆ. ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಸಾಧಕರಿಗೆ ಸಮಾಜ ರತ್ನ ಪ್ರಶಸ್ತಿ ಪ್ರದಾನ ಮಾಡಲಿರುವರು. ಸಿಧ್ಧಗಂಗಾ ಶ್ರೀ ಸ್ಮರಣ ಸಂಚಿಕೆಯನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮೋಹನ ಆಳ್ವ ಬಿಡುಗಡೆಗೊಳಿಸುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News