ಪ್ರಚಾರಕ್ಕೆ ಪೈಲಟ್ ವಾಹನ ಬಳಕೆ ಆರೋಪ: ಖರ್ಗೆ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Update: 2019-05-16 15:55 GMT

ಚಿಂಚೋಳಿ, ಮೇ 16: ನೀತಿ ಸಂಹಿತೆ ಜಾರಿಯಲ್ಲಿದ್ದರೂ ಪ್ರಚಾರಕ್ಕೆ ಕಾಂಗ್ರೆಸ್ ನಾಯಕರು ಪೊಲೀಸ್ ಪೈಲೆಟ್ ವಾಹನ ಬಳುಸುತ್ತಿದ್ದಾರೆ. ಅಲ್ಲದೆ ಈ ವಾಹನಗಳಲ್ಲಿ ಹಣ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಹಾಗೂ ಶಾಸಕ ಪಿ.ರಾಜೀವ್ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಪ್ರಿಯಾಂಕ ಖರ್ಗೆ ವಿರುದ್ದ ಚುನಾವಣಾಧಿಕಾರಿಗಳಿಗೆ ದೂರು ನೀಡಿದ ಶಾಸಕ ಪಿ.ರಾಜೀವ್ ಸುದ್ದಿಗಾರರೊಂದಿಗೆ ಮಾತನಾಡಿದರು.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಚಿಂಚೋಳಿ ಉಪ ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಪೊಲೀಸ್ ಪೈಲೆಟ್ ವಾಹನ ಬಳಸಿಕೊಂಡಿದ್ದಾರೆ. ಅಲ್ಲದೆ, ಈ ಪೈಲೆಟ್‌ಗಳು ಕಾಂಗ್ರೆಸ್‌ಗೆ ಮತ ನೀಡುವಂತೆ ಪ್ರಚಾರ ಮಾಡುತ್ತಿರುವುದು ಕಂಡುಬಂದಿದೆ ಎಂದು ಅವರು ಆರೋಪಿಸಿದರು.

ಇವರ ಮೇಲೆ ಕಾನೂನಿನ ಪ್ರಕಾರ ಸೂಕ್ತ ಕ್ರಮ ವಹಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಮತ್ತು ಚುನಾವಣೆ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲು ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಹಾಗೂ ಪೈಲೆಟ್ ಕರ್ತವ್ಯಕ್ಕೆ ನಿಯೋಜಿಸಿದ ಮತ್ತು ಭಾಗವಹಿಸಿದ ಅಧಿಕಾರಿಗಳ ಮೇಲೆ ಕೂಡಲೆ ಕ್ರಮ ಕೈಗೊಳ್ಳಲು ಕೇಳಿಕೊಂಡಿದ್ದೇವೆ ಎಂದು ರಾಜೀವ್ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್, ಮಾಜಿ ಶಾಸಕ ವಾಲ್ಮೀಕಿ ನಾಯಕರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News