ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಿರ್ಧಾಕ್ಷಿಣ್ಯ ಕ್ರಮ: ಅಧಿಕಾರಿಗಳಿಗೆ ಸಚಿವ ಜಿ.ಟಿ.ದೇವೇಗೌಡ ಎಚ್ಚರಿಕೆ

Update: 2019-05-16 16:57 GMT

ಮೈಸೂರು,ಮೇ.16: ಜಿಲ್ಲೆಯಲ್ಲಿನ ಬರಪರಿಸ್ಥಿತಿ ನಿವಾರಣೆ ಕುರಿತು ಅಧಿಕಾರಿಕಗಳೊಂದಿಗೆ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಗುರುವಾರಸಭೆ ನಡೆಸಿದರು.

ಇದೇ ವೇಳೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಚಿವರು, ಹಲವು ಗ್ರಾಮಗಳಿಗೆ ಸಮರ್ಪಕವಾಗಿ ನೀರನ್ನು ಪೂರೈಸುತ್ತಿಲ್ಲ, ಜೂನ್ 1 ರೊಳಗೆ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.

ಜಿಲ್ಲೆಯಲ್ಲಿ ಎಷ್ಟು ತಾಲೂಕುಗಳು ಬರಪರಿಸ್ಥಿತಿ ಎದುರಿಸುತ್ತಿದೆ. ಅಲ್ಲಿಗೆ ಬೇಕಾದಂತಹ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಅಧಿಕಾರಿಗಳು ಮುಂದಾಗಬೇಕು, ಬರನಿರ್ವಹಣೆಗೆ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಸಾಕಷ್ಟು ಹಣವಿದೆ. ತೊಂದರೆಯಾದ ಕಡೆ ಹಣವನ್ನು ಬಳಸಿಕೊಂಡು ಜನ ಜಾನುವರುಗಳು ತೊಂದರೆ ಅನುಭವಿಸದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.

ಈ ವೇಳೆ ಪ್ರವಾಸೋದ್ಯಮ ಸಚಿವ ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜಿ.ಪಂ. ಸಿಇಓ ಕೆ.ಜ್ಯೋತಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News