ಪರವಾನಿಗೆ ರಹಿತ ಅಕ್ರಮ ಮರಳು ದಾಸ್ತಾನು: 7.50 ಲಕ್ಷ ರೂ. ಮೌಲ್ಯದ ಸೊತ್ತು ವಶ

Update: 2019-05-16 17:22 GMT

ಮಂಗಳೂರು, ಮೇ 16: ಪರವಾನಿಗೆ ಇಲ್ಲದೇ ಮರಳು ತುಂಬಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ಹಾಗೂ ಮರಳು ದಾಸ್ತಾನು ಇರಿಸಿದ್ದ ಲಕ್ಷಾಂತರ ರೂ. ವೌಲ್ಯದ ಮರಳನ್ನು ಪಂಜ, ಪಂಜಟ್ಟ ಉಳಿಯ ಎಂಬಲ್ಲಿ ಮುಲ್ಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟಿಪ್ಪರ್ ಲಾರಿ ಹಾಗೂ ಸುಮಾರು 23 ಟಿಪ್ಪರ್ ಲಾರಿ ಲೋಡ್‌ಗಳಷ್ಟು ಆಗುವ ಮರಳನ್ನು ಪೊಲೀಸರು ಮುಟ್ಟುಗೋಲು ಹಾಕಿದ್ದು, 7.50 ಲಕ್ಷ ರೂ. ಮೌಲ್ಯದ ಸೊತ್ತನ್ನು ವಶಕ್ಕೆ ಪಡೆದಿದ್ದಾರೆ.

ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳನ್ನು ದಾಸ್ತಾನು ಇರಿಸಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಹಾಗೂ ಮೂಲ್ಕಿ ಪೊಲೀಸ್ ಉಪ ನಿರೀಕ್ಷಕರು ಹಾಗೂ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದರು.

2.50 ಲಕ್ಷ ರೂ. ಮೌಲ್ಯದ ಮರಳು ಹಾಗೂ ಐದು ಲಕ್ಷ ರೂ. ಮೌಲ್ಯದ ಟಿಪ್ಪರ್ ಲಾರಿ ಸೇರಿದಂತೆ 7.50 ಲಕ್ಷ ರೂ. ಮೌಲ್ಯದ ಸೊತ್ತನ್ನು ವಶಕ್ಕೆ ಪಡೆಯಲಾಗಿದೆ. ಸ್ವಾಧೀನಪಡಿಸಿಕೊಳ್ಳಲಾದ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನಿರ್ದೇಶನದಂತೆ ಡಿಸಿಪಿಗಳಾದ ಹನುಂತರಾಯ, ಲಕ್ಷ್ಮೀಗಣೇಶ್ ಮಾರ್ಗದರ್ಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ್ ಆರ್. ಗೌಡ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂಲ್ಕಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News