ರಂಗಭೂಮಿ ಪಠ್ಯೇತರ ವಿಷಯವಾಗಲಿ: ಪ್ರೊ.ಶಂಕರ್

Update: 2019-05-16 17:28 GMT

ಮಂಗಳೂರು, ಮೇ 16: ಮಕ್ಕಳಲ್ಲಿ ರಂಗಭೂಮಿಯ ಬಗ್ಗೆ ಆಸಕ್ತಿ ಮೂಡಿಸಲು ಶಾಲೆಗಳಲ್ಲಿ ಪಠ್ಯೇತರ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡುವುದು ಮುಖ್ಯ ಎಂದು ಪ್ರೊ.ಶಂಕರ್ ತಿಳಿಸಿದ್ದಾರೆ.

ಮಂಚಿಯ ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್, ಬೆಂಗಳೂರು, ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ, ಮಂಗಳೂರು, ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘಟನೆಗಳ ವತಿಯಿಂದ ನಗರದ ಪುರಭವನದಲ್ಲಿ ಹಮ್ಮಿಕೊಂಡ ಬಿ.ವಿ.ಕಾರಂತ ನೆನಪಿನ ಎರಡು ದಿನಗಳ ನಾಟಕೋತ್ಸವದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾನು ಇಂದು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರಾಥಮಿಕ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳನ್ನು ಮಾಡಲು ನೀಡಿದ ಅವಕಾಶದಿಂದ ಸಾಧ್ಯವಾಗಿದೆ ಎಂದರು.

ಸಮಾರಂಭದಲ್ಲಿ ನಾಟಕ ನಿರ್ದೇಶಕ ಚಂದ್ರಹಾಸ ಉಳ್ಳಾಲ ಹಾಗೂ ರಘುನಾಥ ಸೋಮಯಾಜಿ ಅತಿಥಿಗಳಾಗಿ ಭಾಗವಹಿಸಿದ್ದರು. ಬಿ.ವಿ.ಕಾರಂತ ರಂಗಭೂಮಿ ಟ್ರಸ್ಟ್‌ನ ಮಂಚಿಯ ಅಧ್ಯಕ್ಷ ಕಜೆ ರಾಮಚಂದ್ರ ಸ್ವಾಗತಿಸಿದರು. ಟ್ರಸ್ಟಿ ಚಂದ್ರಶೇಖರ ಶೆಟ್ಟಿ ವಂದಿಸಿದರು. ಇದೇ ಸಂದರ್ಭದಲ್ಲಿ ಸಂಗಮ ಕಲಾವಿದರು ಮಣಿಪಾಲದಿಂದ ರಕ್ಕಸ ತಂಗಡಿ ನಾಟಕ ಪ್ರದರ್ಶನಗೊಂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News