ಮಂಗಳೂರು: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಒಂದು ಕೋಟಿ ರೂ. ವಶಕ್ಕೆ

Update: 2019-05-17 05:38 GMT

ಮಂಗಳೂರು: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಒಂದು ಕೋಟಿ ರೂ. ಮತ್ತು ಆರೋಪಿಯನ್ನು ಬಂದರು ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಬೆಂಗಳೂರಿನ ಮಲ್ಲೇಶ್ವರಂ ನಿವಾಸಿ ಮಂಜುನಾಥ್ (36) ಪೊಲೀಸರ ವಶದಲ್ಲಿರುವ ಆರೋಪಿ ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ 6.30ರ ಸುಮಾರಿಗೆ ಮಂಗಳೂರಿನ ರಥಬೀದಿಯಲ್ಲಿ ಬಂದರ್ ಪೊಲೀಸ್ ಠಾಣೆ ಸಿಬ್ಬಂದಿ ಗಸ್ತು ತಿರುಗುವ ಸಂದರ್ಭ ಮಂಜುನಾಥ್ ಅನುಮಾನಾಸ್ಪದವಾಗಿ ಬ್ಯಾಗ್  ಹೆಗಲ ಮೇಲೆ ಹಾಕಿ ತಿರುಗುತ್ತಿದ್ದ ವೇಳೆ ವಿಚಾರಿಸಿದಾಗ ಸರಿಯಾದ ಮಾಹಿತಿಯನ್ನು ನೀಡದಿದ್ದು ಹಾಗು ಬ್ಯಾಗ್ ಪರಿಶೀಲನೆ ಮಾಡಿದಾಗ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು ಒಂದು ಕೋಟಿ ರೂ. ನಗದು ವಶಕ್ಕೆ ಪಡೆದುಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News