ಗಂಗೊಳ್ಳಿ: ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ; ರಾಜಸ್ತಾನ ಮೂಲದ ಆರೋಪಿ ಸೆರೆ

Update: 2019-05-17 14:25 GMT

ಗಂಗೊಳ್ಳಿ, ಮೇ 17: ಗಂಗೊಳ್ಳಿಯ ಐದು ವರ್ಷ ವಯಸ್ಸಿನ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ರಾಜಸ್ತಾನ ಮೂಲದ ಯುವಕನನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.

ರಾಜಸ್ತಾನದ ಪ್ರಕಾಶ್(23) ಬಂಧಿತ ಆರೋಪಿ.

ಗಂಗೊಳ್ಳಿಯ ಮನೆ ಯೊಂದಕ್ಕೆ ಟೈಲ್ಸ್ ಕೆಲಸಕ್ಕೆ ಬಂದಿದ್ದ ಈತ ಮೇ 16ರಂದು ಅದೇ ಮನೆಯ ಐದು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಈ ಬಗ್ಗೆ ಸಂತ್ರಸ್ತ ಬಾಲಕಿಯ ತಾಯಿ ನೀಡಿದಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ.

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿಯಲ್ಲಿ ಸಂಜೆ ವೇಳೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಇಂದು ಬೆಳಗ್ಗೆ ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮೇ 29ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News