ಮೋದಿ ವಾರಣಾಸಿಯ ಮತದಾರರಿಗೆ ಲಂಚ ಆಮಿಷ, ಬೆದರಿಕೆ ಒಡ್ಡುತ್ತಿದ್ದಾರೆ: ಮಾಯಾವತಿ ಆರೋಪ

Update: 2019-05-17 15:36 GMT

ಲಕ್ನೊ, ಮೇ 17: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಮತದಾರರಿಗೆ ಲಂಚ ನೀಡುತ್ತಿದ್ದಾರೆ ಹಾಗೂ ಬೆದರಿಕೆ ಒಡ್ಡುತ್ತಿದ್ದಾರೆ. ಚುನಾವಣಾ ಆಯೋಗ ಪಶ್ಚಿಮಬಂಗಾಳದ ಲೋಕಸಭಾ ಕ್ಷೇತ್ರಗಳಲ್ಲಿ ಕಣ್ಣಿರಿಸಿದಂತೆ ವಾರಣಾಸಿಯಲ್ಲಿ ಯಾಕೆ ಕಣ್ಣರಿಸಿಲ್ಲ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಶುಕ್ರವಾರ ಪ್ರಶ್ನಿಸಿದ್ದಾರೆ.

 ನರೇಂದ್ರ ಮೋದಿ ಅವರಿಗೆ ಮತ ನೀಡುವಂತೆ ಹೊರಗಿನವರು ಮತದಾರರಿಗೆ ಆಮಿಷ ಹಾಗೂ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಮಾಯಾವತಿ ಟ್ವೀಟ್ ಮಾಡಿದ್ದಾರೆ.

 ವಾರಣಾಸಿಯಲ್ಲಿ ನರೇಂದ್ರ ಮೋದಿ ಅವರು ಜಯ ಗಳಿಸಲು ಹೊರಗಿನವರು ಮೊದಲು ಆಮಿಷ, ಅನಂತರ ಬೆದರಿಕೆ ಒಡ್ಡುತ್ತಿದ್ದಾರೆ. ಹೀಗಿರುವಾಗ ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಯಲು ಹೇಗೆ ಸಾಧ್ಯ? ಚುನಾವಣಾ ಆಯೋಗ ಪಶ್ಚಿಮಬಂಗಾಳದ ಮೇಲೆ ಕಣ್ಣಿರಿಸಿದಂತೆ ವಾರಣಾಸಿ ಮೇಲೆ ಯಾಕೆ ಕಣ್ಣಿರುಸುತ್ತಿಲ್ಲ ಎಂದು ಮಮತಾ ಬ್ಯಾನರ್ಜಿ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News