ಮೂರು ದಿನದೊಳಗೆ ಒಂದೇ ಜಾಗದಲ್ಲಿ ಎರಡು ಬಾರಿ ಕಳವು !

Update: 2019-05-17 16:43 GMT

ಬೆಂಗಳೂರು, ಮೇ 17: ಮೂರು ದಿನದೊಳಗೆ ಒಂದೇ ಜಾಗದಲ್ಲಿ ಎರಡು ಬಾರಿ ಕಳ್ಳತನ ನಡೆದಿರುವ ಘಟನೆ ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವಿಲ್ಸನ್ ಗಾರ್ಡ ವ್ಯಾಪ್ತಿಯಲ್ಲಿನ ಹೈಪರ್ ಬಜೆಟ್, ಸೂಪರ್ ಮಾರ್ಕೆಟ್‌ನಲ್ಲಿ ಇದೇ ತಿಂಗಳ 14ರ ರಾತ್ರಿ ದುಷ್ಕರ್ಮಿಗಳು 1 ಲಕ್ಷ ರೂ. ನಗದು ಕಳವು ಮಾಡಿದ್ದಾರೆ. ಈ ಸಂಬಂಧ ಸೂಪರ್ ಮಾರುಕಟ್ಟೆ ಮಾಲಕ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ದೂರು ನೀಡಿದ್ದರು.

ಆದರೆ, ಗುರುವಾರ ರಾತ್ರಿ ಮತ್ತೆ ಹೈಪರ್ ಬಜೆಟ್ ಮಾರುಕಟ್ಟೆಗೆ ನುಗ್ಗಿರುವ ದುಷ್ಕರ್ಮಿಗಳು, ಹಲವು ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ವಿಲ್ಸನ್ ಗಾರ್ಡನ್ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News