ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Update: 2019-05-17 18:02 GMT

ಶಿವಮೊಗ್ಗ, ಮೇ 17: ಎರಡು ಬೈಕ್‍ಗಳ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೆರೆಕೊಪ್ಪ ಸಮೀಪ ನಡೆದಿದೆ. 

ಬೈಕ್ ಚಾಲಕ ಸುಭಾಷ್ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮತ್ತೊಂದು ಬೈಕ್‍ನ ಚಾಲಕ ಕೃಷ್ಣ, ಹಿಂಬದಿ ಸವಾರ ಪ್ರಿಯತಮ ಎಂಬುವರಿಗೆ ಗಾಯವಾಗಿದ್ದು, ಇವರನ್ನು ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಚಾಲಕರ ಅಜಾಗರೂಕ, ವೇಗದ ಚಾಲನೆಯೇ ಅವಘಡಕ್ಕೆ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News