ಈ.ಡಿ. ಯಿಂದ ಮಾಜಿ ಸಿಎಂ ಓಂಪ್ರಕಾಶ್ ಚೌಟಾಲರ 2 ಕೋ. ರೂ. ಮೌಲ್ಯದ ಸೊತ್ತು ಮುಟ್ಟುಗೋಲು

Update: 2019-05-17 18:39 GMT

ಚಂಡಿಗಢ, ಮೇ 17: ಅಧ್ಯಾಪಕರ ನೇಮಕಾತಿ ಹಗರಣದಲ್ಲಿ ಪ್ರಸ್ತುತ ಜೈಲಿನಲ್ಲಿರುವ ಹರ್ಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲ ಅವರ ಸೊತ್ತನ್ನು ಜಾರಿ ನಿರ್ದೇಶನಾಲಯ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.

 ಚೌಟಾಲ ಹೊಂದಿರುವ 6.09 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಬಗ್ಗೆ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ತನಿಖೆ ನಡೆಸುತ್ತಿದೆ. ಹಣ ವಂಚನೆ ತಡೆ ಕಾಯ್ದೆ ಅಡಿಯಲ್ಲಿ ಹೊಸದಿಲ್ಲಿಯಲ್ಲಿರುವ ಅವರ 2 ಕೋಟಿ ರೂಪಾಯಿ ಮೌಲ್ಯದ ಭೂಮಿ ಹಾಗೂ ತೋಟದ ಮನೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಹಿಂದೆ ಜಾರಿ ನಿರ್ದೇಶನಾಲಯ ಚೌಟಾಲ ಅವರ 4.15 ಕೋಟಿ ರೂಪಾಯಿ ವೌಲ್ಯದ ಸೊತ್ತನ್ನು ವಶಪಡಿಸಿಕೊಂಡಿತ್ತು.

ಚೌಟಾಲ ಹಾಗೂ ಅವರ ಪುತ್ರರಾದ ಅಭಯ್ ಚೌಟಾಲ, ಅಜಯ್ ಚೌಟಾಲ ವಿರುದ್ಧ ಸಿಬಿಐ ಪ್ರಥಮ ಮಾಹಿತಿ ದಾಖಲಿಸಿದ ಬಳಿಕ ತನಿಖೆ ಆರಂಭಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News