ಜೆಎನ್‌ಯು ವಿದ್ಯಾರ್ಥಿ ಆತ್ಮಹತ್ಯೆ

Update: 2019-05-17 18:52 GMT

ಹೊಸದಿಲ್ಲಿ, ಮೇ. 17: ಜವಾಹರ್ ಲಾಲ್ ವಿಶ್ವವಿದ್ಯಾನಿಲಯದ ಅಧ್ಯಯನ ಕೊಠಡಿಯೊಂದರಲ್ಲಿ ಶುಕ್ರವಾರ ವಿದ್ಯಾರ್ಥಿಯೋರ್ವ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

 ಬೆಳಗ್ಗೆ 11.30ರ ಹೊತ್ತಿಗೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ನಮಗೆ ಮಾಹಿತಿ ನೀಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ. ವಿಶ್ವವಿದ್ಯಾನಿಲಯದ ಎಂಎ 2ನೇ ವರ್ಷದ ವಿದ್ಯಾರ್ಥಿ ನೇಣು ಹಾಕಿಕೊಂಡು ಅಸ್ವಸ್ಥನಾಗಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ, ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News