87ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ದೇವೇಗೌಡರಿಗೆ ಗಣ್ಯರ ಶುಭಾಶಯ

Update: 2019-05-18 06:54 GMT

ಬೆಂಗಳೂರು, ಮೇ 18: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ, ಹಿರಿಯ ರಾಜಕಾರಣಿ ಎಚ್.ಡಿ.ದೇವೇಗೌಡ ಅವರಿಗೆ ಇಂದ 87ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಸಹಿತ ಹಲವರು ದೇವೇಗೌಡರಿಗೆ ಶುಭಾಶಯ ಕೋರಿದ್ದಾರೆ.

‘‘ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಜನ್ಮ ದಿನದ ಶುಭಾಶಯಗಳು. ಆರೋಗ್ಯಕರವಾದ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ’’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

‘‘ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ರೈತರು ಮತ್ತು ಗ್ರಾಮ ಭಾರತದ ಬಗೆಗಿನ ಅವರ ಕಾಳಜಿ ಹಾಗೂ ಇಳಿವಯಸ್ಸಿನಲ್ಲಿಯೂ ದಣಿವರಿಯದ ಹೋರಾಟದ ಕೆಚ್ಚು ನನಗೆ ಸದಾ ಪ್ರೇರಣೆ. ಅವರಿಗೆ ಆರೋಗ್ಯ ಮತ್ತು ಆಯುಷ್ಯವನ್ನು ಹಾರೈಸುತ್ತೇನೆ’’ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇವೇಗೌಡ ಅವರು ಇಂದು ಬೆಳಗ್ಗೆ ಕುಟುಂಬದವರ ಜೊತೆ ಶ್ರೀ ಕ್ಷೇತ್ರ ತಿರುಮಲದಲ್ಲಿ ಶ್ರೀ ವೆಂಕಟೇಶ್ವರನ ದರ್ಶನ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News