ಯಾವುದೇ ವಿವಾದಾತ್ಮಕ ಹೇಳಿಕೆ ನೀಡಬೇಡಿ: ಮೈತ್ರಿ ಪಕ್ಷಗಳ ಮುಖಂಡರಿಗೆ ಸಿಎಂ ಮನವಿ

Update: 2019-05-18 14:11 GMT

ಬೆಂಗಳೂರು, ಮೇ 18: 'ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮುಖಂಡರು ಯಾವುದೇ ವಿಭಿನ್ನ, ವಿವಾದಾತ್ಮಕ ಹೇಳಿಕೆ ನೀಡಬಾರದು' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಉಭಯ ಪಕ್ಷಗಳ ನಾಯಕರಿಗೆ ಮನವಿ ಮಾಡಿದ್ದಾರೆ.

'ಕೇಂದ್ರದಲ್ಲಿ ಇನ್ನೊಂದು ಹೊಸ ಸರಕಾರ ರಚನೆಯಾಗುವ ಮಹತ್ತರ ಘಟ್ಟದಲ್ಲಿ ನಾವಿದ್ದೇವೆ. ಕೇಂದ್ರದಲ್ಲಿ ಬಿಜೆಪಿಯೇತರ ಸರಕಾರ ರಚನೆಯ ನಮ್ಮೆಲ್ಲರ ಆಶಯ ಸಾಕಾರಗೊಳಿಸುವ ಪ್ರಯತ್ನಗಳು ನಡೆಯುತ್ತಿರುವ ಸಂದರ್ಭದಲ್ಲಿ ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿಪಕ್ಷಗಳ ಮುಖಂಡರು ವ್ಯತಿರಿಕ್ತ ಹೇಳಿಕೆಗಳನ್ನು ನೀಡುವುದು ಇಂತಹ ಪ್ರಯತ್ನಗಳಿಗೆ ಹಿನ್ನಡೆಯಾಗಬಹುದು'

'ಆದುದರಿಂದ ಉಭಯ ಪಕ್ಷಗಳ ಮುಖಂಡರು ಇಂತಹ ಆಶಯಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಯಾವುದೇ ವಿಭಿನ್ನ, ವಿವಾದಾತ್ಮಕ ಹೇಳಿಕೆ ನೀಡದಂತೆ ನನ್ನ ಕಳಕಳಿಯ ಮನವಿ' ಎಂದು ಟ್ವಿಟ್ಟರ್ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News