ಮೈಸೂರು: ಆಪ್ತ ಸಚಿವರ ಜೊತೆ ಮುಖ್ಯಮಂತ್ರಿ ಕುಮಾರಸ್ವಾಮಿ ಗೌಪ್ಯ ಸಭೆ

Update: 2019-05-18 17:27 GMT

ಮೈಸೂರು,ಮೇ.18: ತಿರುಪತಿಯಿಂದ ತರಾತುರಿಯಲ್ಲಿ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಆಪ್ತ ಸಚಿವರ ಜೊತೆ ಖಾಸಗಿ ರೆಸಾರ್ಟ್ ನಲ್ಲಿ ಶನಿವಾರ ಗೌಪ್ಯ ಸಭೆ ನಡೆಸಿದರು.

ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ಹೇಳಿಕೆಯಿಂದ ಮೈತ್ರಿ ಸರ್ಕಾರಕ್ಕೆ ಆಗಬಹುದಾದ ಪರಿಣಾಮದ ಕುರಿತು ಚರ್ಚಿಸಲಾಗಿದೆ ಎನ್ನಲಾಗಿದೆ.

ಕಾಂಗ್ರೆಸ್ ಜೊತೆ ಮುಂದುವರಿಯುವ ಬದಲು ಚುನಾವಣೆಗೆ ಹೋಗುವುದು ಒಳ್ಳೆಯದು ಎಂಬ ಬಸವರಾಜ ಹೊರಟ್ಟಿ ಹೇಳಿಕೆ ಜೆಡಿಎಸ್ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಹಾಗಾಗಿ ಸರ್ಕಾರಕ್ಕೆ ಉಂಟಾಗಬಹುದಾದ ಗಂಡಾಂತರ ತಪ್ಪಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಚಿವರಾದ ಎಚ್.ಡಿ.ರೇವಣ್ಣ, ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು ಅವರ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. 

ಇನ್ನೂ ಎರಡು ದಿನ ಮೈಸೂರಿನಲ್ಲೇ ತಂಗಲಿರುವ ಕುಮಾರಸ್ವಾಮಿ ರವಿವಾರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ರೆಸಾರ್ಟ್‍ನಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News