ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಅಭ್ಯರ್ಥಿ ಸನ್ನಿ ಡಿಯೋಲ್‌ಗೆ ನೋಟಿಸ್

Update: 2019-05-18 17:38 GMT

ಹೊಸದಿಲ್ಲಿ, ಮೇ 18: ಪಂಜಾಬ್‌ನ ಗುರುದಾಸ್‌ಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸನ್ನಿ ಡಿಯೋಲ್ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ನೋಟಿಸ್ ಜಾರಿಗೊಳಿಸಿದೆ.

ಅಂತಿಮ ಹಂತದ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯ ಶುಕ್ರವಾರ ಸಂಜೆ ಕೊನೆಗೊಂಡಿದ್ದರೂ ಸನ್ನಿ ಡಿಯೋಲ್ ಪಠಾಣ್‌ಕೋಟ್‌ನಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಿರುವ ಬಗ್ಗೆ ಚುನಾವಣಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಸಭೆಯಲ್ಲಿ ಧ್ವನಿವರ್ಧಕವನ್ನೂ ಬಳಸಲಾಗಿತ್ತು ಹಾಗೂ ಸುಮಾರು 200 ಮಂದಿ ಪಾಲ್ಗೊಂಡಿದ್ದರು.

ಮೌನ ಅವಧಿ(ಮತದಾನ ಆರಂಭಕ್ಕಿಂತ 48 ಗಂಟೆ ಮೊದಲಿನ ಅವಧಿ)ಯಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸುವ ಮೂಲಕ ಸನ್ನಿ ಡಿಯೋಲ್ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ಪಂಜಾಬ್‌ನ 13 ಸಂಸದೀಯ ಕ್ಷೇತ್ರಗಳಿಗೆ ಮೇ 19ರಂದು ಮತದಾನ ನಡೆಯಲಿದೆ. ಸನ್ನಿ ಡಿಯೋಲ್ ಗುರುದಾಸ್‌ಪುರ ಸಂಸದೀಯ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಸುನಿಲ್ ಜಾಖಡ್ ಎದುರಾಳಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News