ಕೇದಾರನಾಥ್ ದೇವಾಲಯಕ್ಕೆ ಭೇಟಿ ನೀಡಲು ಅನುಮತಿ ನೀಡಿದ ಚು.ಆಯೋಗಕ್ಕೆ ಪ್ರಧಾನಿ ಕೃತಜ್ಞತೆ

Update: 2019-05-19 06:24 GMT

ಕೇದಾರನಾಥ್, ಮೇ 19: ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಲು ಅನುಮತಿ ನೀಡಿರುವ ಚುನಾವಣಾ ಆಯೋಗಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರವಿವಾರ ಕೃತಜ್ಞತೆ ಸಲ್ಲಿಸಿದ್ದಾರೆ.

ದೇವಾಲಯದ ಸಮೀಪವಿರುವ ಗುಹೆಯಲ್ಲಿ ಸುಮಾರು 17 ಗಂಟೆಗಳನ್ನು ಕಳೆದಿರುವ ಮೋದಿ, ದೇವಾಲಯದಲ್ಲಿ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಿದ್ದರು.

‘‘ನನಗೆ ಹಲವು ಬಾರಿ ಕೇದಾರನಾಥಕ್ಕೆ ಭೇಟಿ ನೀಡುವ ಅವಕಾಶ ಲಭಿಸಿದೆ. ಚುನಾವಣಾ ಪ್ರಕ್ರಿಯೆ ನಡೆಯುತ್ತಿರುವ ಸಮಯದಲ್ಲೂ ಬಿಡುವು ಮಾಡಿಕೊಂಡು ಕೇದಾರನಾಥಕ್ಕೆ ಭೇಟಿ ನೀಡಿರುವ ಮಾಧ್ಯಮಗಳಿಗೂ ಕೃತಜ್ಞತೆ ಸಲ್ಲಿಸುವೆ. ಮಾಧ್ಯಮಗಳ ಉಪಸ್ಥಿತಿಯಿಂದಾಗಿ ದೇವಾಲಯ ನಗರ ಸಾಕಷ್ಟು ಅಭಿವೃದ್ದಿಯಾಗಿದೆ ಎಂಬ ಸಂದೇಶ ರವಾನೆಯಾಗಿದೆ’’ ಎಂದರು.

ಪ್ರಧಾನಿ ವಿರುದ್ಧ ಟಿಎಂಸಿ ದೂರು

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಪ್ರಧಾನಿ ಮೋದಿಗೆ ಕೇದಾರನಾಥಕ್ಕೆ ಭೇಟಿ ನೀಡಲು ಅವಕಾಶ ನೀಡಿರುವುದನ್ನು ಆಕ್ಷೇಪಿಸಿ ವಿಪಕ್ಷ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ದೇವಾಲಯ ನಗರಕ್ಕೆ ಭೇಟಿ ನೀಡಿರುವ ಮೋದಿ ಕೇದಾರನಾಥದ ಮಾಸ್ಟರ್‌ಪ್ಲಾನ್‌ನ್ನು ಘೋಷಿಸಿದ್ದಾರೆ. ಈ ಮೂಲಕ ಮತದಾರರನ್ನು ಸೆಳೆಯಲು ಯತ್ನಿಸಿದ್ದಾರೆ. ಇದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಈ ಕುರಿತು ಕ್ರಮಕೈಗೊಳ್ಳಬೇಕೆಂದು ಟಿಎಂಸಿ, ಚು.ಆಯೋಗಕ್ಕೆ ದೂರು ಸಲ್ಲಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News