ಜು. 1ರಂದು ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನ; ಲಾಂಛನ ಅನಾವರಣ

Update: 2019-05-20 08:36 GMT

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜುಲೈ 1ರಂದು ನಡೆಯಲಿರುವ ಜಿಲ್ಲಾ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಸೋಮವಾರ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಹೆಗ್ಗಡೆಯವರು, ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಜ್ಞಾನವಂತರು, ಪ್ರಜ್ಞಾವಂತರಾಗಿದ್ದು, ಸರಿಯಾದ ಮಾಹಿತಿ ಪಡೆದು ಘಟನೆಯ ವರದಿ ಮಾಡುತ್ತಾರೆ. ಜಿಲ್ಲೆಯ ಎರಡು ತಲೆಮಾರುಗಳನ್ನು ಕಂಡಿದ್ದೇನೆ. ಹಿರಿಯ ಪತ್ರಕರ್ತರ ತತ್ವಾದರ್ಶ ಮೈಗೂಡಿಸಿಕೊಂಡು, ಜನರ ನಂಬಿಕೆ ಕಳೆದುಕೊಳ್ಳದೆ ಮಾಧ್ಯಮದ ಘನತೆ ಗೌರವ ಉಳಿಸಿ ಮುನ್ನಡೆಯಬೇಕೆಂದರು. ಪತ್ರಕರ್ತರ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ, ಸಮ್ಮೇಳನದ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎನ್.ಆರ್.ಪೂವಣಿ, ಸದಸ್ಯ ಧನಕೀರ್ತಿ ಅರಿಗ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News