ಧರ್ಮಸ್ಥಳದಲ್ಲಿ ನೀರಿನ ಅಭಾವ: ವೀರೇಂದ್ರ ಹೆಗ್ಗಡೆ ಜೊತೆ ಸರಕಾರದ ಮುಖ್ಯ ಕಾರ್ಯದರ್ಶಿ ಚರ್ಚೆ

Update: 2019-05-20 12:38 GMT
ವೀರೇಂದ್ರ ಹೆಗ್ಗಡೆ

ಬೆಂಗಳೂರು, ಮೇ 20: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ತೀವ್ರ ಅಭಾವ ತಲೆದೋರಿರುವ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಭೀರವಾಗಿ ಪರಿಗಣಿಸಿದ್ದು, ಅವರ ಸಲಹೆಯಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಸರಕಾರದ ಕಳಕಳಿಗೆ ಕೃತಜ್ಞತೆ ವ್ಯಕ್ತಪಡಿಸಿದ ವಿರೇಂದ್ರ ಹೆಗ್ಗಡೆಯವರು ಇನ್ನೊಂದು ಚೆಕ್‌ಡ್ಯಾಂ ನಿರ್ಮಾಣದ ಅಗತ್ಯವಿದೆ ಎಂದು ಮನವಿ ಮಾಡಿದರು.

ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಗಾಗಿ ಸೋಮವಾರ ಸಂಜೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News