ಮಹಾಘಟ ಬಂಧನ್ ನುಚ್ಚುನೂರು: ಕೋಟ ಶ್ರೀನಿವಾಸ ಪೂಜಾರಿ

Update: 2019-05-20 15:18 GMT

ಉಡುಪಿ, ಮೇ 20: ಲೋಕಸಭಾ ಚುನಾವಣೆ ಕುರಿತ ಮತದಾನೋತ್ತರ ಸಮೀಕ್ಷೆ ದೇಶದಲ್ಲಿ ಸಂಚಲನ ಮೂಡಿಸಿದೆ. ದೇಶದಲ್ಲಿ 350 ಹಾಗೂ ಕರ್ನಾಟಕ ದಲ್ಲಿ 22ಕ್ಕೂ ಅಧಿಕ ಸ್ಥಾನವನ್ನು ನಾವು ಗೆಲ್ಲಲಿದ್ದೇವೆ. ಈ ಮೂಲಕ ದೇಶದಲ್ಲಿ ಮಹಾಘಟಬಂಧನ್ ನುಚ್ಚುನೂರಾಗಲಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಮೈತ್ರಿ ಕೂಟದಲ್ಲಿ ಚುನಾವಣೆ ಸಂದರ್ಭದಲ್ಲೇ ಬಿರುಕು ಮೂಡಿದೆ. ಚುನಾವಣೆ ಫಲಿತಾಂಶದ ಬಳಿಕ ಆಂತರಿಕ ಭಿನ್ನಾಭಿಪ್ರಾಯ ಪರಾಕಾಷ್ಟೆಗೆ ತಲುಪಲಿದ್ದು, ರಾಜ್ಯದಲ್ಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಛಿದ್ರವಾಗಲಿದೆ ಎಂದು ತಿಳಿಸಿದರು.

ಮಾಧ್ಯಮಗಳಿಗೆ ಕಡಿವಾಣ ಹಾಕುವ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಕೋಟ, ತುರ್ತು ಪರಿಸ್ಥಿತಿ ಕಾಲದಲ್ಲೇ ಪತ್ರಿಕಾ ಸ್ವಾತಂತ್ರ್ಯದ ಮೇಲೆ ಕಡಿವಾಣ ಹಾಕಲು ಆಗಿರಲಿಲ್ಲ. ಪ್ರಜಾಪ್ರಭುತ್ವ ಇರುವಂತಹ ರಾಷ್ಟ್ರದಲ್ಲಿ ಇಂತಹ ಚಿಲ್ಲರೆ ಆಟಗಳು ನಡೆಯುವುದಿಲ್ಲ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News