ಕಟ್ಟಡದ ಮೆಟ್ಟಿಲಿನಿಂದ ಬಿದ್ದು ಮೃತ್ಯು

Update: 2019-05-20 16:33 GMT

ಕಾರ್ಕಳ, ಮೇ 20: ಕಾರ್ಕಳ ಪೇಟೆಯ ವಾಣಿಜ್ಯ ಸಂಕೀರ್ಣದ ಮೆಟ್ಟಿಲ ಮೇಲಿನಿಂದ ಅಕಸ್ಮಿಕವಾಗಿ ಕೆಳಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೇ 19ರಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ಮಿಯ್ಯರು ಗ್ರಾಮದ ವಲೇರಿಯನ್ ಡಿಸೋಜ (51) ಎಂದು ಗುರುತಿಸಲಾಗಿದೆ. ಇವರು ಮದ್ಯಪಾನ ಮಾಡಿ ಕಾರ್ಕಳ ಪೇಟೆಯ ಮಾರ್ಕೆಟ್ ವಠಾರದಲ್ಲಿರುವ ಪುರಸಭೆಗೆ ಸಂಬಂಧಿಸಿದ ಇಂದಿರಾಗಾಂಧಿ ಮಾರುಕಟ್ಟೆ ವಾಣಿಜ್ಯ ಸಂಕೀರ್ಣದ ಮೆಟ್ಟಿಲಿನಿಂದ ಅಕಸ್ಮಿಕವಾಗಿ ಕೆಳಕ್ಕೆ ಬಿದ್ದು ಮೃತಪಟ್ಟಿ ದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News