ಮೈಸೂರು: ಕ್ಷುಲ್ಲಕ ಕಾರಣಕ್ಕೆ ಗಲಾಟೆ; ಆರು ಮಂದಿ ಬಂಧನ

Update: 2019-05-20 17:25 GMT

ಮೈಸೂರು,ಮೇ 20: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಮಂಡಿಮೊಹಲ್ಲಾದ ಚಿಕ್ಕ ಮಾರುಕಟ್ಟೆ ಬಳಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ವಿಜಯಕುಮಾರ್, ಯಶವಂತ್, ಪ್ರಶಾಂತ್, ಮಹಮದ್ ಪರ್ವೀಜ್, ಪರ್ಹಾನ್ ಹಾಗೂ ರಿಯಾನ್ ರನ್ನು ಬಂಧಿಸಲಾಗಿದೆ. ಅಂಗಡಿ ಮುಂದೆ ಬೊಂಬೆ ಇಡುವ ಹಾಗೂ ಬೋರ್ಡ್ ಗಳನ್ನು ತೆಗೆಯುವ ವಿಚಾರದಲ್ಲಿ ಹೋಟೆಲ್ ಮಾಲಕ ಹಾಗೂ ಡ್ರೆಸ್ ಅಂಗಡಿ ಮಾಲಕರ ನಡುವೆ ಗಲಾಟೆ ಶುರುವಾಗಿದೆ. ನಂತರ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದೆ ಎನ್ನಲಾಗಿದೆ.

ಪ್ರಕರಣ ಸಂಬಂಧ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಗಲಾಟೆಯಲ್ಲಿ ಭಾಗಿಯಾದ ಮತ್ತಷ್ಟು ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ.

ಈ ಕುರಿತು ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಸ್ಥಳದಲ್ಲಿ ಬೂದಿ ಮುಚ್ಚಿದ ಕೆಂಡದ ವಾತಾವರಣ ನಿರ್ಮಾವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News