ಲಂಚಕ್ಕೆ ಬೇಡಿಕೆ ಇಟ್ಟ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ: ಆರೋಪ

Update: 2019-05-20 17:44 GMT

ಬೆಂಗಳೂರು, ಮೇ 20: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಭಾಯಿ ವಿರುದ್ಧ ಲಂಚಕ್ಕೆ ಬೇಡಿಕೆಯಿಟ್ಟ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪ್ರವೀಣ್ ಎಂಬುವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ನಾಗಲಕ್ಷ್ಮೀ ಭಾಯಿ ಅವರ ಆಪ್ತ ಕಾರ್ಯದರ್ಶಿ ಮೂಲಕ ಮೇ 9ರಂದು ಮಾನವ ಹಕ್ಕುಗಳ ಆಯೋಗಕ್ಕೆ ಯಾವುದೇ ನೋಟಿಸ್ ಜಾರಿಗೊಳಿಸದೆ, ಮೊಬೈಲ್ ಕರೆ ಮೂಲಕ ಕಚೇರಿಗೆ ಕರೆಸಿಕೊಂಡು 5 ಲಕ್ಷ ರೂ ಹಣ ನೀಡಬೇಕು. ಇಲ್ಲದಿದ್ದರೆ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆಂದು ಪ್ರವೀಣ್ ಅವರು ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

ಯಾರು ಪ್ರವೀಣ್?: ಜನವರಿ 11ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಪೊಲೀಸರು ನಕಲಿ ವಿಜ್ಞಾನಿ ಎಂದು ಹೇಳಿಕೊಂಡು ಮಹಿಳೆಯರಿಗೆ ವಂಚನೆ ಮಾಡಿದ ಆರೋಪದ ಮೇಲೆ ಪ್ರವೀಣ್ ಅನ್ನು ಬಂಧಿಸಿದ್ದರು ಎನ್ನಲಾಗಿದೆ.

ಪ್ರವೀಣ್, ಬೆಂಗಳೂರಿನ ನಾಗರಭಾವಿಯಲ್ಲಿ ಸಿಂಪ್ಲಿ ಸೈನ್ಸ್ ಇನ್ಸ್‌ಟಿಟ್ಯೂಟ್ ಹೆಸರಿನಲ್ಲಿ ಕಂಪೆನಿ ಆರಂಭಿಸಿ, ತಾನು ನಾಸಾ ವಿಜ್ಞಾನಿ ಎಂದೆಲ್ಲಾ ಹೇಳಿಕೊಂಡು ಮಹಿಳೆಯರ ಬಳಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದ. ಈ ಸಂಬಂಧ ಸಂತ್ರಸ್ತರು, ಅಂದಿನ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ ಸಿಂಗ್‌ಗೆ ದೂರು ಸಲ್ಲಿಸಿದ್ದರು. ಬಳಿಕ, ಬಿ.ಕೆ ಸಿಂಗ್ ಅವರು, ಜ್ಞಾನಭಾರತಿ ಠಾಣಾ ಪೊಲೀಸರಿಗೆ ದೂರು ಸಲ್ಲಿಸಿ, ಸೂಕ್ತ ತನಿಖೆ ನಡೆಸುವಂತೆ ಆದೇಶ ನೀಡಿದ್ದರು. ಆನಂತರ ತನಿಖೆ ನಡೆಸಿದ್ದ ಪೊಲೀಸರು ಪ್ರವೀಣ್ ಅನ್ನು ಬಂಧಿಸಿದ್ದರು. ಈ ಕುರಿತು ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News