ಕೊಯ್ನ ಜಲಾಶಯದಿಂದ ನೀರು ಬಿಡುಗಡೆಗೆ ಆಗ್ರಹಿಸಿ ರೈತ ಸಂಘಟನೆಗಳಿಂದ ಪ್ರತಿಭಟನೆ

Update: 2019-05-20 17:45 GMT

ಬೆಳಗಾವಿ, ಮೇ 20: ಬತ್ತಿ ಹೋಗಿರುವ ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಬಿಡಬೇಕೆಂದು ರೈತ ಸಂಘಟನೆಗಳಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆಸಿದರು.

ಹಿಡಕಲ್ ಜಲಾಶಯದಿಂದ 94ಕಿಮೀ ದೂರದ ಕೃಷ್ಣಾ ನದಿಗೆ ಒಂದು ಟಿಎಂಸಿ ನೀರು ಹರಿಸುವ ನಿರ್ಧಾರ ಅವೈಜ್ಞಾನಿಕವಾಗಿದೆ. ಜಲಾಶಯದಿಂದ ಮುಂಜಾನೆ ನೀರು ಬಿಟ್ಟರೂ ಕೃಷ್ಣಾ ನದಿಗೆ ತಲುಪುವುದು ಸಾಕಷ್ಟು ವಿಳಂಬವಾಗುತ್ತದೆ. ಇದರ ಬದಲಿಗೆ ಕೊಯ್ನಾ ಜಲಾಶಯದಿಂದ ನೀರು ಬಿಡುವಂತಹ ಕಾರ್ಯಕ್ಕೆ ಸರಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರತಿಭಟನಾ ರೈತರು ಆಗ್ರಹಿಸಿದರು.

ರಾಜ್ಯ ಸರಕಾರ ಕೇವಲ ಅಧಿಕಾರಿಗಳನ್ನು ಕಳುಹಿಸಿ ಮಾಹಾರಾಷ್ಟ್ರ ಸರಕಾರಕ್ಕೆ ನೀರು ಬಿಡುವಂತೆ ಮನವಿ ಸಲ್ಲಿಸಿದರೆ ಯಾವುದೆ ಪ್ರಯೋಜವಾಗದು. ಸರಕಾರದ ಶಾಸಕರು, ಸಚಿವರ ನಿಯೋಗ ಮಹಾರಾಷ್ಟ್ರ ಸರಕಾರವನ್ನು ಈ ಸಂಬಂಧ ಒತ್ತಾಯಿಸಬೇಕಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News