ದ.ಕ.ಜಿಲ್ಲಾ ಕಾಂಗ್ರೆಸ್‌ನಿಂದ ರಾಜೀವ್ ಗಾಂಧಿ ಪುಣ್ಯತಿಥಿ ಆಚರಣೆ

Update: 2019-05-21 07:01 GMT

ಮಂಗಳೂರು, ಮೇ 21: ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯತಿಥಿಯನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಮಂಗಳವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಆಚರಿಸಲಾಯಿತು.

ಪಕ್ಷದ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿತು. ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ದೇಶಕ್ಕೆ ರಾಜೀವ್ ಗಾಂಧಿ ನೀಡಿದ ಕೊಡುಗೆ ಅಪಾರ. ದೇಶದ ಅಭಿವೃದ್ಧಿಯ ನಿಟ್ಟಿನಲ್ಲಿ ಅವರು ಸ್ಪಷ್ಟ ಗುರಿಯನ್ನು ಹೊಂದಿದ್ದರು ಎಂದರು.

ಈ ಸಂದರ್ಭ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪಕ್ಷದ ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಸುರೇಶ್ ಬಲ್ಲಾಳ್, ಬಿ.ಎ.ಮುಹಮ್ಮದ್ ಹನೀಫ್, ಅಬ್ಬಾಸ್ ಅಲಿ ಬೊಳಂತೂರು, ಕೆ.ಕೆ.ಶಾಹುಲ್ ಹಮೀದ್, ಶಶಿಧರ ಹೆಗ್ಡೆ, ನವೀನ್ ಡಿಸೋಜ, ಟಿ.ಕೆ. ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News