ಕೆ.ವಿ. ಗಣಪಯ್ಯ, ಗಣೇಶ ಭಟ್ಟರಿಗೆ ಯಕ್ಷಗಾನ ಪ್ರಶಸ್ತಿ

Update: 2019-05-21 14:21 GMT
ಕೆ.ವಿ.ಗಣಪಯ್ಯ, ನೇವಣ ಗಣೇಶ ಭಟ್ಟ

ಉಡುಪಿ, ಮೇ 21: ಯಕ್ಷಗಾನ ಕಲಾರಂಗ ನೀಡುವ ಈ ವರ್ಷದ ಮಟ್ಟಿ ಮುರಳಿಧರ ರಾವ್ ಪ್ರಶಸ್ತಿಗೆ ಹಿರಿಯ ವಿದ್ವಾಂಸ, ತಾಳಮದ್ದಲೆ ಅರ್ಥಧಾರಿ ಕೆ.ವಿ ಗಣಪಯ್ಯ ಆಯ್ಕೆಯಾಗಿದ್ದಾರೆ.

ಅದೇ ರೀತಿ ಇನ್ನೊಬ್ಬ ಹಿರಿಯ ಅರ್ಥಧಾರಿ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಪ್ರಶಸ್ತಿಗೆ ಹಿರಿಯ ವಿದ್ವಾಂಸ ಹಾಗೂ ಅರ್ಥಧಾರಿ ಹರಿದಾಸ ನೇವಣೆ ಗಣೇಶ್ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಕೆ.ಗಣೇಶ್ ರಾವ್, ಕಾರ್ಯದರ್ಶಿ ಮುರಲಿ ಕಡೆಕಾ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಕ್ಷಗಾನ ಕಲಾರಂಗದ ವತಿಯಿಂದ ಈಗ ರಾಜಾಂಗಣದಲ್ಲಿ ನಡೆದಿರುವ ತಾಳಮದ್ದಲೆ ಸಪ್ತಾಹದ ಕೊನೆಯ ದಿನವಾದ ಮೇ 25ರಂದು ನಡೆಯುವ ಸಮಾರೋಪ ಸಮಾರಂಭದ ಸಂದರ್ಭದಲ್ಲಿ ಈ ಎರಡು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ಎರಡೂ ಪ್ರಶಸ್ತಿಗಳು ಪ್ರಶಸ್ತಿ ಪತ್ರ ಹಾಗೂ 20 ಸಾವಿರ ರೂ. ನಗದು ಪುರಸ್ಕಾರವನ್ನು ಒಳಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶ ತೀರ್ಥರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅದಮಾರು ಮಠದ ಕಿರಿಯ ಯತಿಗಳಾದ ಶ್ರೀಈಶಪ್ರಿಯತೀರ್ಥ ಶ್ರೀ ಅನುಗ್ರಹ ಸಂದೇಶ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್‌ನ ಮಹಾಪ್ರಬಂಧಕ ರಮೇಶ್ ಎಸ್, ಕಟೀಲಿನ ಅನುವಂಶಿಕ ಅರ್ಚಕ ವೆಂಕಟರಮಣ ಅಸ್ರಣ್ಣ, ಮಂಗಳೂರಿನ ಲೆಕ್ಕ ಪರಿಶೋಧಕ ಶಿವಾನಂದ ಪೈ ಬಿ. ಭಾಗವಹಿಸಲಿದ್ದಾರೆ. ಹಿರಿಯ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿ ಅಭಿನಂದನಾ ಭಾಷಣ ವಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News