ಅಪರಿಚಿತ ವಾಹನ ಢಿಕ್ಕಿ: ವೃದ್ಧೆ ಮೃತ್ಯು

Update: 2019-05-21 15:34 GMT

ಗಂಗೊಳ್ಳಿ, ಮೇ 21: ಮರವಂತೆಯ ರಾಮ ಮಂದಿರದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೇ 20ರಂದು ಸಂಜೆ 7:45ರ ಸುಮಾರಿಗೆ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆ ಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಮರವಂತೆ ನಿವಾಸಿ ಸುಬ್ಬಿ(70) ಎಂದು ಗುರುತಿಸಲಾಗಿದೆ.

ಇವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ವೊಂದು ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸುಬ್ಬಿ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News