ಮತ ಎಣಿಕೆ: ದ.ಕ. ಜಿಲ್ಲೆಯಾದ್ಯಂತ ನಿಷೇಧಾಜ್ಞೆ

Update: 2019-05-22 15:25 GMT

ಮಂಗಳೂರು, ಮೇ 22: ದ.ಕ. ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮೇ 23ರಂದು ಪೂರ್ವಾಹ್ನ 5ರಿಂದ ಮೇ 24ರಂದು ಪೂವಾಹ್ನ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ನಿಷೇಧಿತ ಅವಧಿಯಲ್ಲಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮತ ಎಣಿಕೆ ಕೇಂದ್ರಗಳ ಆವರಣವನ್ನು ಹೊರತು ಪಡಿಸಿ ಸಾರ್ವಜನಿಕ ರಸ್ತೆ, ಬೀದಿ, ಓಣಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರಕಾರಿ ಕಚೇರಿ ಸುತ್ತಮುತ್ತ ಗುಂಪು ಸೇರುವು ದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಮಾರಕ ಆಯುಧ, ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ. ನಿಷೇಧಿತ ಅವಧಿಯಲ್ಲಿ ಯಾವುದೇ ವಿಜಯೋತ್ಸವ ವಾಹನಗಳನ್ನು ಉಪಯೋಗಿಸಿ ರ್ಯಾಲಿ ಸಾರ್ವಜನಿಕ ಮೆರವಣಿಗೆ, ಸಾರ್ವಜನಿಕ ರಾಜಕೀಯ ಸಭೆ, ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಿದೆ ಎಂದರು.

ಪಟಾಕಿಗಳನ್ನು ಸಿಡಿಸುವುದು ಸೇರಿದಂತೆ ಯಾವುದೇ ಸ್ಫೋಟಕ ವಸ್ತುಗಳನ್ನು ಹೊಂದುವಂತಿಲ್ಲ. ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೇಷ್ಠೆ ಮಾಡುವುದು ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಮಾಡುವುದು, ಪ್ರಕಟನಾ ಪತ್ರಿಕೆಗಳ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಅಥವಾ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News