ರಮೇಶ್ ಜಾರಕಿಹೊಳಿ-ಅಥಣಿ ಶಾಸಕ ಕುಮಟಳ್ಳಿ ಭೇಟಿ

Update: 2019-05-22 16:31 GMT

ಬೆಂಗಳೂರು, ಮೇ 22: ಲೋಕಸಭಾ ಚುನಾವಣೆಯ ಫಲಿತಾಂಶ ನಾಳೆ ಪ್ರಕಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿಯನ್ನು ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಬುಧವಾರ ನಗರದ ಸೆವೆನ್ ಮಿನಿಸ್ಟರ್ ಕ್ವಾಟ್ರಸ್‌ನಲ್ಲಿರುವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ ಮಹೇಶ್ ಕುಮಟಳ್ಳಿ, ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.

ಲೋಕಸಭಾ ಚುನಾವಣೆಯ ಬಳಿಕ ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ನಿರ್ಧರಿಸಿರುವ ರಮೇಶ್ ಜಾರಕಿಹೊಳಿ, ತಮ್ಮೊಂದಿಗೆ ಕನಿಷ್ಠ ಐದು ಶಾಸಕರನ್ನು ಕರೆ ತರುವುದಾಗಿ ಬಿಜೆಪಿ ಹೈಕಮಾಂಡ್‌ಗೆ ತಿಳಿಸಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News