ಉಡುಪಿ ಚಿಕ್ಕಮಗಳೂರು ಕ್ಷೇತ್ರ: ಶೋಭಾ ಕರಂದ್ಲಾಜೆ ಮುನ್ನಡೆ

Update: 2019-05-23 06:55 GMT

ಉಡುಪಿ, ಮೇ 23: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನಾಲ್ಕನೇ ಸುತ್ತಿನ ಎಣಿಕೆಯಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಅವರು 88,718 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ.

ಈವರೆಗೆ 2,75,839 ಮತಗಳ ಎಣಿಕೆ ಮುಗಿದಿದ್ದು ಶೋಭಾ ‌1,74,255 ಮತಗಳನ್ನೂ ಅವರ ಸಮೀಪ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮದ್ವರಾಜ್ 85,537 ಮತಗಳನ್ನು ಗಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News