ನರೇಂದ್ರ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದು ಹೀಗೆ..

Update: 2019-05-23 12:16 GMT

ಬೆಂಗಳೂರು, ಮೇ 23: ‘ಲೋಕಸಭಾ ಚುನಾವಣೆಯಲ್ಲಿ ಗೆದ್ದಿರುವ ಬಿಜೆಪಿ ಮತ್ತು ಮುಖ್ಯಪಾತ್ರ ವಹಿಸಿದ್ದ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಮುಂದಿನ ಐದು ವರ್ಷ ಜನ ಮೆಚ್ಚುವಂತಹ ಆಡಳಿತ ನೀಡಲಿ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.

‘ಇಡೀ ದೇಶವನ್ನು ಕುವೆಂಪು ಅವರು ಹೇಳಿರುವಂತೆ ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡುವ ರೀತಿಯಲ್ಲಿ ಆಡಳಿತ ನೀಡಲಿ ಎಂದು ಹಾರೈಸುತ್ತೇನೆ’. ‘ರಾಜ್ಯದಿಂದ ಆಯ್ಕೆಯಾದ ಎಲ್ಲ ಸಂಸದರೂ ಚುನಾವಣೆ ಮುಗಿದ ಮೇಲೆ ಪಕ್ಷಾತೀತವಾಗಿ ರಾಜ್ಯದ ಪ್ರತಿನಿಧಿಗಳಾಗಿರುತ್ತಾರೆ, ಅವರೆಲ್ಲರಿಗೂ ಅಭಿನಂದನೆಗಳು’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ರಾಜ್ಯದ ಧ್ವನಿ ಕೇಳಿಸುವಂತೆ ಮತ್ತು ಹಿತರಕ್ಷಿಸುವಂತೆ ಅವರೆಲ್ಲರೂ ಕೆಲಸ ಮಾಡಲಿ ಎಂದು ಹಾರೈಸುತ್ತೇನೆ. ಸೋಲು-ಗೆಲುವುಗಳು ರಾಜಕೀಯ ಜೀವನದ ಅವಿಭಾಜ್ಯ ಅಂಗ. ಇದೇ ಪ್ರಜಾಪ್ರಭುತ್ವದ ಸೌಂದರ್ಯ ಎಂದು ಸಿದ್ದರಾಮಯ್ಯ ಸರಣಿ ಟ್ವಿಟ್ ಮೂಲಕ ವಿಶ್ಲೇಷಿಸಿದ್ದಾರೆ.

‘ನಮ್ಮ ಪಕ್ಷದ ಸೋಲು ಅನಿರೀಕ್ಷಿತವಾಗಿದ್ದರೂ ಜನಾಭಿಪ್ರಾಯಕ್ಕೆ ತಲೆ ಬಾಗಿ ವಿನಯಪೂರ್ವಕವಾಗಿ ಸ್ವೀಕರಿಸಿದ್ದೇವೆ. ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿದ ಮತದಾರ ಬಂಧುಗಳಿಗೆ ಅಭಿನಂದನೆಗಳು’

-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News