ನಳಿನ್‌ಗೆ ಅಭಿನಂದಿಸಿದ ಶಾಸಕ ವೇದವ್ಯಾಸ ಕಾಮತ್

Update: 2019-05-23 14:28 GMT

ಮಂಗಳೂರು, ಮೇ 23: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಐತಿಹಾಸಿಕ ಗೆಲುವನ್ನು ಕಂಡಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದಿಸುವುದಾಗಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಬಹಳ ದೊಡ್ಡ ಅಂತರದಿಂದ ಬಿಜೆಪಿ ದ.ಕ. ಜಿಲ್ಲೆಯಲ್ಲಿ ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ. ಪಕ್ಷದ ಗೆಲುವಿಗೆ ತೆರೆಮರೆಯಲ್ಲಿ ಕೆಲಸ ಮಾಡಿದ ಪ್ರತಿಯೊಬ್ಬ ನಾಗರಿಕರೂ ಈ ಗೆಲುವಿನಲ್ಲಿ ಪಾಲುದಾರರಾಗಿದ್ದಾರೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಐದು ವರ್ಷಗಳಲ್ಲಿ ರಾಷ್ಟ್ರದ ಅಭಿವೃದ್ಧಿಗೆ ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದರು. ಅದೇ ರೀತಿಯಲ್ಲಿ ಸಂಸದ ನಳಿನ್‌ಕುಮಾರ್ ಕಟೀಲು ಕೂಡ ಹಗಲಿರುಳು ಕ್ಷೇತ್ರದ ಅಭಿವೃದ್ಧಿಗೆ ದುಡಿದಿರುವುದಕ್ಕೆ ಜನರ ಆರ್ಶೀವಾದ ಸಿಕ್ಕಿದೆ. ಇದು ಸಂಭ್ರಮದ ಘಳಿಗೆ ಎಂದು ಶಾಸಕ ವೇದವ್ಯಾಸ ಕಾಮತ್ ಪ್ರಕಟನೆಯಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News