ಡಿ.ವಿ.ಎಸ್‌ಗೆ 1.47 ಲಕ್ಷ ಮತಗಳ ಅಂತರದಲ್ಲಿ ಗೆಲುವು

Update: 2019-05-23 15:54 GMT

ಬೆಂಗಳೂರು, ಮೇ 23: ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಡಿ.ವಿ.ಸದಾನಂದಗೌಡ ತನ್ನ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಭೈರೇಗೌಡ ವಿರುದ್ಧ ಗೆಲುವನ್ನು ಸಾಧಿಸುವ ಮೂಲಕ ಸತತ ಎರಡನೇ ಬಾರಿಗೆ ಜಯಗಳಿಸಿದ್ದಾರೆ.

ಈ ಬಾರಿ ಕ್ಷೇತ್ರದಲ್ಲಿ 15,59,459 ಮತಗಳು ಚಲಾವಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ 8,24,500 ಮತ ಪಡೆದು ಜಯಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಭೈರೇಗೌಡ 6,76,982 ಮತ ಪಡೆದು ಪರಾಭವಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಒಟ್ಟು 1,47,518 ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಮೊದಲ ಸುತ್ತಿನಿಂದಲೂ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಮುನ್ನಡೆ ಕಾಯ್ದುಕೊಂಡಿದ್ದರಿಂದ ಕಾಂಗ್ರೆಸ್‌ನ ಕೃಷ್ಣಭೈರೇಗೌಡರ ವಿರುದ್ಧ 1.47 ಲಕ್ಷ ಅಂತರದಲ್ಲಿ ಗೆದ್ದಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜನರು ವಿಶ್ವಾಸವಿಟ್ಟು ನನ್ನನ್ನು ಗೆಲ್ಲಿಸಿದ್ದು, ಎಲ್ಲಾ ಮತದಾರರಿಗೆ ಕೃತಜ್ಞತೆಗಳು. ಸಂಸದನಾಗಿ ಕೇಂದ್ರ ಮತ್ತು ರಾಜ್ಯಕ್ಕೆ ಸೇತುವೆಯಾಗಿ ಕೆಲಸ ಮಾಡಲಾಗುವುದು. ಕ್ಷೇತ್ರದ ಅಭಿವೃದ್ಧಿಗಾಗಿ ಪ್ರವಾಸ ಕೈಗೊಳ್ಳಲಾಗುವುದು.

-ಡಿ.ವಿ.ಸದಾನಂದಗೌಡ, ಸಂಸದ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News