ವಯನಾಡ್‌ನಲ್ಲಿ 4 ಲಕ್ಷ ಮತಗಳ ಅಂತರದಲ್ಲಿ ರಾಹುಲ್ ಜಯಭೇರಿ
Update: 2019-05-23 22:10 IST
ವಯನಾಡ್, ಮೇ.23: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ್ದಾರೆ. ವಯನಾಡ್‌ನಲ್ಲಿ ರಾಹುಲ್ ಗಾಂಧಿ ತನ್ನ ಹತ್ತಿರದ ಪ್ರತಿಸ್ಪರ್ಧಿ ಸಿಪಿಐಯ ಪಿ.ಪಿ ಸುನೀರ್ ವಿರುದ್ಧ ನಾಲ್ಕು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.
ಇದೇ ವೇಳೆ, ತನ್ನ ಸಾಂಪ್ರದಾಯಿಕ ಕ್ಷೇತ್ರ ಉತ್ತರ ಪ್ರದೇಶದ ಅಮೇಥಿಯಲ್ಲಿ ರಾಹುಲ್ ಗಾಂಧಿ ಬಿಜೆಪಿಯ ಸ್ಮತಿ ಇರಾನಿ ವಿರುದ್ಧ ಸೋಲನುಭವಿಸಿದ್ದಾರೆ.