ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಕೆ.ಪಾಟೀಲ್ ರಾಜೀನಾಮೆ

Update: 2019-05-24 14:31 GMT

ಬೆಂಗಳೂರು ಮೇ 24: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ನೈತಿಕ ಹೊಣೆಹೊತ್ತು ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಎಚ್.ಕೆ.ಪಾಟೀಲ್ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ರಾಜೀನಾಮೆ ಪತ್ರ ಬರೆದಿರುವ ಎಚ್.ಕೆ.ಪಾಟೀಲ್, ನಮಗೆಲ್ಲರಿಗೂ ಇದು ಆತ್ಮಾವಲೋಕನ ಮಾಡಿಕೊಳ್ಳುವ ಸಮಯ. ರಾಜ್ಯದಲ್ಲಿ ಉಂಟಾದ ಸೋಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ. ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿ ಪಕ್ಷದ ಸೇವೆ ಮಾಡಲು ಅವಕಾಶ ಮಾಡಿಕೊಟ್ಟ ತಮಗೆಲ್ಲರಿಗೂ ಈ ಸಂದರ್ಭದಲ್ಲಿ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ರಾಜೀನಾಮೆ ಕೊಟ್ಟ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭಾರಿ ಅಂತರದಲ್ಲಿ ಹಿನ್ನಡೆಯಾಗಿದೆ. ಕಾಂಗ್ರೆಸ್ ಸೋಲಿನ ಕುರಿತು ಆತ್ಮಾವಲೋಕನ ಮಾಡಬೇಕಿದೆ. ಜೆಡಿಎಸ್ ಜೊತೆಗಿನ ಮೈತ್ರಿ ದುಬಾರಿ ಆಯ್ತಿ ಎನ್ನುವುದರ ಕುರಿತು ಚರ್ಚೆ ನಡೆಯಬೇಕಿದೆ ಎಂದು ಅಭಿಪ್ರಾಯಿಸಿದರು.

ರಾಜ್ಯದಲ್ಲಿ ಮೈತ್ರಿ ಮುಂದುವರೆಯಬೇಕಾ ಬೇಡವಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೈತ್ರಿ ಮುಂದುವರಿಯಬೇಕಾ ಎನ್ನುವುದಕ್ಕೆ ಕಾಲವೇ ಉತ್ತರಿಸಲಿದೆ. ಎರಡೂ ಕಡೆಯವರು ಕುಳಿತು ಈ ಬಗ್ಗೆ ಚರ್ಚಿಸಬೇಕಾಗಿದೆ. ಈ ಫಲಿತಾಂಶ ನಮ್ಮೆಲ್ಲರಿಗೂ ದೊಡ್ಡ ಆಘಾತವನ್ನು ಉಂಟು ಮಾಡಿರುವುದಂತು ನಿಜವೆಂದು ಅವರು ಹೇಳಿದರು.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News