ಮುನ್ನೂರು ಯುವಕ ಮಂಡಲದ ಸುವರ್ಣ ಮಹೋತ್ಸವ

Update: 2019-05-24 09:17 GMT

ಉಳ್ಳಾಲ, ಮೇ 24: ಯಾವುದೇ ಸಂಘ-ಸಂಸ್ಥೆಗಳು ಧನಾತ್ಮಕವಾಗಿ ಮುನ್ನಡೆದಾಗ ಆಡಳಿತ ವ್ಯವಸ್ಥೆ ಸುಲಭವಾಗುತ್ತದೆ. ಮುನ್ನೂರು ಯುವಕ ಮಂಡಲ ಕಳೆದ ಐವತ್ತು ವರ್ಷಗಳಲ್ಲಿ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುವ ಮೂಲಕ ಸಮಾಜದ ಪ್ರಶ್ನೆಗಳಿಗೆ ಉತ್ತರ ನೀಡುವಲ್ಲಿ ಸಫಲವಾಗಿದೆ ಎಂದು ಸಚಿವ ಯು.ಟಿ.ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕುತ್ತಾರ್‌ನಲ್ಲಿರುವ ಮುನ್ನೂರು ಯುವಕ ಮಂಡಲದ ಸುವರ್ಣ ಮಹೋತ್ಸವ ಸಂಭ್ರಮದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಬಂಟರ ಸಂಘದ ಅಧ್ಯಕ್ಷ ವಿವೇಕ್ ಶೆಟ್ಟಿ ಬೊಳ್ಯಗುತ್ತು ಸಮಾರಂಭವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿದ್ದ ಜಿಪಂ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ಶುಭ ಹಾರೈಸಿದರು.

ಈ ಸಂದರ್ಭ ಎಸೆಸೆಲ್ಸಿಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಅರ್ಹ ವಿದ್ಯಾರ್ಥಿಗಳಿಗ ಪುಸ್ತಕಗಳನ್ನು ವಿತರಿಸಲಾಯಿತು.

ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಅಧ್ಯಕ್ಷ ವಿಶ್ವನಾಥ ಗಟ್ಟಿ ವಗ್ಗ ಅಧ್ಯಕ್ಷತೆ ವಹಿಸಿದ್ದರು. ಉಳ್ಳಾಲ ಸೈಯದ್ ಮದನಿ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ, ಪತ್ರಕರ್ತ ಶಶಿಧರ್ ಪೊಯ್ಯತ್ತಬೈಲ್, ನಾಟಕಕಾರ ಡಾ.ಸಂಜೀವ ದಂಡಕೇರಿ, ರಾಜ್ಯ ಕೈಗಾರಿಕಾ ಮಂಡಳಿಯ ಉಪಾಧ್ಯಕ್ಷ ಮಯೂರ್ ಉಳ್ಳಾಲ್, ಯುವಕ ಮಂಡಲದ ಸಲಹೆಗಾರ ಕೃಷ್ಣಪ್ಪಸಾಲ್ಯಾನ್, ಗೌರವಾಧ್ಯಕ್ಷ ರವೀಂದ್ರನಾಥ ಪೂಂಜ, ಹರೀಶ್ ಕುಂಡೋಳಿ, ಅಧ್ಯಕ್ಷ ಶಶೀಂದ್ರ ಕುಕ್ಯಾನ್ ಮತ್ತಿತರರು ಉಪಸ್ಥಿತರಿದ್ದರು. ಜಯ ದೇಸೋಡಿ ಸ್ವಾಗತಿಸಿದರು. ಐತಪ್ಪವಂದಿಸಿದರು. ಮನೋಹರ್ ಕಾರ್ಯಕ್ರಮ ನಿರೂಪಿಸಿದರು 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News