ರಾಜ್ಯ ಸಮ್ಮಿಶ್ರ ಸರಕಾರ ಸುಭದ್ರವಾಗಿರುತ್ತದೆ : ಡಿಸಿಎಂ

Update: 2019-05-24 09:41 GMT

ಬೆಂಗಳೂರು, ಮೇ 24: ಚುನಾವಣಾ ಫಲಿತಾಂಶ ಸಮ್ಮಿಶ್ರ ಸರಕಾರದ ಮೇಲೆ ಪರಿಣಾಮ ಬೀರದು, ಸಮ್ಮಿಶ್ರ ಸರಕಾರ ಸುಭದ್ರವಾಗಿರುತ್ತದೆ. ಸಿಎಂ ಕುಮಾರಸ್ವಾಮಿ ನೇತೃತ್ವದ ಸರಕಾರ  ಮುಂದುವರಿಯುತ್ತದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ‍್ ತಿಳಿಸಿದ್ದಾರೆ.
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಮೊದಲ ಬಾರಿ ಸಿಎಂ ಹಾಗೂ ಡಿಸಿಎಂ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
 ಮುಂದೆ ನಾಲ್ಕು ವರ್ಷಗಳ ಕಾಲ  ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದರು.
ರಾಜ್ಯದಲ್ಲಿ ಆಡಳಿತ ನಡೆಸಲು ಜನಾದೇಶವಿರುವುದು ಸಮ್ಮಿಶ್ರ ಸರಕಾರಕ್ಕೆ . ಬಿಜೆಪಿಗೆ ಕೇಂದ್ರದಲ್ಲಿ ಸರಕಾರ ರಚನೆಗೆ ಜನಾದೇಶ ಸಿಕ್ಕಿದೆ ಎಂದರು.
ರಾಜ್ಯದಲ್ಲಿ ಸರಕಾರವನ್ನು ಅಸ್ಥಿರಗೊಳಿಸಲು ವಿಪಕ್ಷಗಳಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ  ಮುಖ್ಯ ಮಂತ್ರಿ ಎಚ್‌ಡಿ ಕುಮಾರಸ್ವಾಮಿ  ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News