ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಫೆಲೋಶಿಪ್

Update: 2019-05-24 12:32 GMT

ಉಡುಪಿ, ಮೇ 24: 2019-20ನೇ ಸಾಲಿನಲ್ಲಿ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಸಮುದಾಯದ ದೇಶದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಪೂರ್ಣಕಾಲಿಕವಾಗಿ ಎಂಫಿಲ್ ಮತ್ತು ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೆಆರ್‌ಎಫ್ ಮಾದರಿಯಲ್ಲಿ ಫೆಲೋಶಿಪ್ ನೀಡುವ ಕಾರ್ಯಕ್ರಮವಿದ್ದು, ಇದಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಂಫಿಲ್ ಮತ್ತು ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಫೆಲೋಶಿಪ್ ಅರ್ಜಿಯನ್ನು ಇಲಾಖೆಯ ವೆಬ್‌ಸೈಟ್- https://gokdom.kar.nic.in ಅಥವಾ - https://dom.karnataka.gov.in/udupi ಮೂಲಕ ಅರ್ಜಿಯನ್ನು ಡೌನ್‌ಲೋಡ್ ಮಾಡಿ, ಪ್ರಿಂಟ್ ಪಡೆದು ಮಾರ್ಗ ಸೂಚಿಯಂತೆ ಭರ್ತಿಮಾಡಿ, ಸೂಚಿಸಿರುವ ಎಲ್ಲಾ ದಾಖಲೆಗಳೊಂದಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಜತಾದಿ್ರ, ಮಣಿಪಾಲ ಇಲ್ಲಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:0820-2574881ನ್ನು ಸಂಪರ್ಕಿ ಸುವಂತೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News