×
Ad

ಪದವೀಧರ, ಪ್ರಾಥಮಿಕ ಶಾಲಾ ಶಿಕ್ಷಕರ: ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ

Update: 2019-05-24 20:40 IST

ಉಡುಪಿ, ಮೇ 24: 2018-19ನೇ ಸಾಲಿನಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6ರಿಂದ 8ನೇ ತರಗತಿ) ವೃಂದದ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆ ವಳಕಾಡು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.

ಜಿಲ್ಲೆಗೆ ಸಂಬಂಧಿಸಿದಂತೆ ಒಟ್ಟು 371 ಅಭ್ಯರ್ಥಿ ಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಗಳು ಮೇ 25ರಂದು ಬೆಳಗ್ಗೆ 10:30ರಿಂದ ಅಪರಾಹ್ನ 1  ಗಂಟೆಯ ವರೆಗೆ ಹಾಗೂ 2:30ರಿಂದ 5:30ರವರೆಗೆ, ಅಲ್ಲದೇ ಮೇ 26ರಂದು ಬೆಳಗ್ಗೆ 10ರಿಂದ 1ಗಂಟೆಯವರೆಗೆ ಹಾಗೂ ಅಪರಾಹ್ನ 2:30ರಿಂದ 4:30ರವರೆಗೆ ನಡೆಯಲಿದೆ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿ ಗಳು ನಿಗದಿತ ಸಮಯಕ್ಕೆ ಸರಿಯಾಗಿ ಹಾಲ್ ಟಿಕೆಟ್‌ನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು. ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ಪೋನ್ ತರುವುದನ್ನು ನಿಷೇಧಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ (ದೂರವಾಣಿ ಸಂಖ್ಯೆ: 0820-2574578) ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News