ಸ್ಪರ್ಧಾತ್ಮಕ ಪರೀಕ್ಷೆ: ನಿಷೇದಾಜ್ಞೆ

Update: 2019-05-24 15:12 GMT

ಉಡುಪಿ, ಮೇ 24: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಯ ಸ್ಪರ್ಧಾತ್ಮಕ ಪರೀಕ್ಷೆಗಳು ಮೇ 25 ಮತ್ತು 26ರಂದು ಜಿಲ್ಲೆಯ ಸರಕಾರಿ ಹೆಣ್ಣು ಮಕ್ಕಳ ಪದವಿ ಪೂರ್ವ ಕಾಲೇಜು ಉಡುಪಿ ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆ ಒಳಕಾಡು ಇಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು, ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗದಿತ ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀ. ವ್ಯಾಪ್ತಿಯಲ್ಲಿ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿದ್ದಾರೆ.

ಈ ನಿಷೇಧಾಜ್ಞೆಯು ಪರೀಕ್ಷೆ ನಡೆಯಲಿರುವ ದಿನಗಳಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆ: ರಜೆ

 ಉಡುಪಿ ಜಿಲ್ಲೆಯಲ್ಲಿ 2018-19ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6 ರಿಂದ 8ನೇ ತರಗತಿ) ವೃಂದದ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜನ್ನು (ಪ್ರೌಢಶಾಲಾ ವಿಭಾಗ) ಪರೀಕ್ಷಾ ಕೇಂದ್ರವಾಗಿ ಗುರುತಿಸಿರುವುದರಿಂದ ಮೇ 25ರಂದು ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ (ಪ್ರೌಢ ಶಾಲಾ ವಿಬಾಗ) ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News