×
Ad

ಸ್ಥಳೀಯ ಸಂಸ್ಥೆಗಳ ಚುನಾವಣೆ: ಜೂ.6ರವರೆಗೆ ಆಯುಧ ಪರವಾನಿಗೆ ಅಮಾನತು ಅವಧಿ ವಿಸ್ತರಣೆ

Update: 2019-05-24 21:03 IST

ಮಂಗಳೂರು, ಮೇ 24: ಲೋಕಸಭಾ ಚುನಾವಣೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆತ್ಮರಕ್ಷಣೆಗಾಗಿ ಮಂಜೂರು ಮಾಡಿದ್ದ ಆಯುಧ ಪರವಾನಿಗೆಗಳನ್ನು ತಾತ್ಕಾಲಿಕ ಅವಧಿಯ ಅಮಾನತು ಪ್ರಕ್ರಿಯೆಯನ್ನು ಜೂ.6ರವರೆಗೆ ವಿಸ್ತರಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಲೋಕಸಭಾ ಚುನಾವಣೆ ಪ್ರಯುಕ್ತ ಈ ಮೊದಲು ಮಾ.11ರಿಂದ ಮೇ 31ರವರೆಗೆ ತಾತ್ಕಾಲಿಕ ಅವಧಿಗೆ ಅಮಾನತಿನಲ್ಲಿರಿಸಲಾಗಿತ್ತು. ಆದರೆ ಪ್ರಸ್ತುತ ಮೂಡುಬಿದಿರೆ ಪುರಸಭೆ ಹಾಗೂ ಮುಲ್ಕಿ ಪಟ್ಟಣ ಪಂಚಾಯತ್‌ನ ಚುನಾವಣೆಯ ಅವಧಿಯಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಜೂ.6ರವರೆಗೆ ಆಯುಧ ಪರವಾನಿಗೆ ತಾತ್ಕಾಲಿಕ ಅಮಾನತು ಅವಧಿಯನ್ನು ವಿಸ್ತರಿಸಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News