ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್‌ರಿಂದ ರಾಜೀನಾಮೆಯ ಪ್ರಸ್ತಾಪ ಸಾಧ್ಯತೆ

Update: 2019-05-24 15:54 GMT

ಹೊಸದಿಲ್ಲಿ, ಮೇ 24: ಲೋಕಸಭಾ ಚುನಾವಣೆಯಲ್ಲಿ ಎದುರಾದ ಅವಮಾನಕರ ಸೋಲಿನ ಕುರಿತು ವಿಚಾರ ವಿಮರ್ಶೆಗೆ ಶನಿವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆಯ ಪ್ರಸ್ತಾಪ ಮುಂದಿಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾಗವಹಿಸಲಿದ್ದಾರೆ. ಇತ್ತೀಚೆಗೆ ಅಂತ್ಯಗೊಂಡ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯೆದುರು ಪಕ್ಷಕ್ಕೆ ಆಗಿರುವ ಅವಮಾನಕಾರಿ ಸೋಲಿನ ಬಗ್ಗೆ ಸಭೆಯಲ್ಲಿ ಚರ್ಚೆ ಮತ್ತು ವಿಮರ್ಶೆ ನಡೆಯಲಿದ್ದು ಈ ಸಂದರ್ಭ ಸೋಲಿನ ನೈತಿಕ ಹೊಣೆ ಹೊತ್ತು ರಾಹುಲ್ ರಾಜೀನಾಮೆ ನೀಡುವ ಪ್ರಸ್ತಾಪ ಮುಂದಿಡುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ಅಮೇಥಿಯಲ್ಲಿ ಸೋತು ಕೇರಳದ ವಯನಾಡ್‌ನಲ್ಲಿ ಗೆದ್ದಿದ್ದಾರೆ. ಕಾಂಗ್ರೆಸ್ ಪಕ್ಷ 52 ಸ್ಥಾನದಲ್ಲಿ ಗೆದ್ದಿದ್ದು ಪಕ್ಷದ ಕಳಪೆ ಸಾಧನೆ ಬಗ್ಗೆ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಪಕ್ಷದೊಳಗಿನಿಂದಲೇ ಒತ್ತಾಯ ಕೇಳಿಬರುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News