ಮೇ 29 ಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸಾರ್ವತ್ರಿಕ ರಜೆ ಘೋಷಣೆ

Update: 2019-05-24 17:34 GMT

ಬೆಂಗಳೂರು, ಮೇ 24: ಲೋಕಸಭಾ ಚುನಾವಣೆಯ ಬಳಿಕ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುತ್ತಿದ್ದು, ರಾಜ್ಯದ 63 ನಗರ ಸ್ಥಳೀಯ ಸಂಸ್ಥೆಗಳಿಗೆ ಮೇ 29 ರಂದು ಮತದಾನ ನಡೆಯಲಿದೆ.

ಮತದಾರರಿಗೆ ಮತದಾನ ಮಾಡಲು ಅವಕಾಶವಾಗುವಂತೆ, ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಹಾಗು ಉಪ ಚುನಾವಣೆ ನಡೆಯುವ ಆಯಾಯ ನಗರ ಸ್ಥಳೀಯ ಸಂಸ್ಥೆಯ ಆಯಾ ವಾರ್ಡಿನ ವ್ಯಾಪ್ತಿಯಲ್ಲಿ, ತಾಲೂಕು ಪಂಚಾಯತ್ ಮತ್ತು ಉಪ ಚುನಾವಣೆ ನಡೆಯುವ ಗ್ರಾಮ ಪಂಚಾಯತ್ ಗಳ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲ ರಾಜ್ಯ ಸರಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಮತ್ತು ಸರಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಮತದಾನ ದಿನ ರಜೆ ಘೋಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News