ಸುಧಾಮೂರ್ತಿಗೆ ‘ಅನುಪಮಾ ಪ್ರಶಸ್ತಿ’
Update: 2019-05-24 23:09 IST
ಬೆಂಗಳೂರು, ಮೇ 24: ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ನೀಡುವ ಪ್ರಸಕ್ತ ಸಾಲಿನ ‘ಅನುಪಮಾ ಪ್ರಶಸ್ತಿ’ಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾ ಮೂರ್ತಿ ಭಾಜನರಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವು ಜೂನ್ 2ರಂದು ಬೆಳಗ್ಗೆ 10.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಕೃಷ್ಣರಾಜ ಪರಿಷನ್ಮಂದಿರದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.