ಮರಕ್ಕೆ ಬೈಕ್ ಢಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

Update: 2019-05-25 07:29 GMT

ಶಿವಮೊಗ್ಗ: ಮರಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ಗಾಯಗೊಂಡ ಘಟನೆ  ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿಯ ಗೋವಿನಕೋವಿ ಬಳಿ ನಡೆದಿದೆ.

ಮೃತರನ್ನು ಹಾವೇರಿ ನಿವಾಸಿ ಸೈಯದ್ (26)  ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News