ಕಲಬುರಗಿ: ಅಂಬೇಡ್ಕರ್ ಭಾವಚಿತ್ರಕ್ಕೆ ಸೆಗಣಿ ಎರಚಿ ಅಪಮಾನ
Update: 2019-05-25 17:39 IST
ಕಲಬುರಗಿ, ಮೇ 25: ಕಮಲಾಪುರ ತಾಲೂಕಿನ ದಸ್ತಾಪುರ ಗ್ರಾಮದಲ್ಲಿ ಕಿಡಿಗೇಡಿಗಳು ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸೆಗಣಿ ಎರಚಿ ಅಪಮಾನ ಮಾಡಿರುವ ಘಟನೆ ನಡೆದಿದೆ.
ಘಟನೆಯಿಂದಾಗಿ ದಸ್ತಾಪುರ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು ರಸ್ತೆತಡೆ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅಂಗಡಿಗಳ ಮೇಲೆ ಕಲ್ಲುತೂರಾಟ ನಡೆದಿದ್ದು, ಬೈಕ್‌ಗಳನ್ನು ಜಖಂಗೊಳಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಆರೋಪಿಗಳನ್ನು ಕೂಡಲೆ ಬಂಧಿಸಲಾಗುವುದು. ಗ್ರಾಮದಲ್ಲಿ ಶಾಂತಿ ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.