ರಾಜ್ಯಮಟ್ಟದ ಮುಕ್ತ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಉದ್ಘಾಟನೆ

Update: 2019-05-25 15:42 GMT

ಉಡುಪಿ, ಮೇ 25: ಬ್ಯಾಡ್ಮಿಂಟನ್ ಸ್ಪೋರ್ಟ್ಸ್ ಕ್ಲಬ್ ಉಡುಪಿ- ಮಣಿಪಾಲ ಮತ್ತು ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್‌ನ ಆಶ್ರಯದಲ್ಲಿ ಪುರುಷರ, ವಯಸ್ಕರ ಹಾಗೂ ಬಾಲಕ ಬಾಲಕಿಯರಿಗಾಗಿ ಅಜ್ಜರಕಾಡು ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಏರ್ಪಡಿಸಲಾದ 18ನೆ ರಾಜ್ಯಮಟ್ಟದ ಮುಕ್ತ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್‌ನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಶನಿವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಮಕ್ಕಳು ಕ್ರೀಡೆಯಲ್ಲಿ ತರಬೇತಿ ಪಡೆಯು ವುದು ಮಾತ್ರವಲ್ಲ ಪಂದ್ಯಾಟಗಳಲ್ಲಿ ಭಾಗವಹಿಸುವುದು ಮುಖ್ಯ. ಮೈಸೂರು, ಬೆಂಗಳೂರಿನಲ್ಲಿ ನಡೆಯುವಷ್ಟು ಬ್ಯಾಡ್ಮಿಂಟನ್ ಪಂದ್ಯಾಟಗಳು ನಮ್ಮ ಜಿಲ್ಲೆಯಲ್ಲಿ ನಡೆಯುತ್ತಿಲ್ಲ. ಇದರಿಂದ ಪ್ರತಿಭೆಗಳು ಹೊರಬರಲು ತೊಡಕು ಆಗುತ್ತದೆ. ಜಿಲ್ಲೆಯ ಮಕ್ಕಳು ರಾಜ್ಯಮಟ್ಟದಲ್ಲಿ ಸಾಧನೆ ಮಾಡಬೇಕಾದರೆ ಈ ರೀತಿ ನಿರಂತರ ಪಂದ್ಯಾಟಗಳು ನಡೆಯುತ್ತಿರಬೇಕು ಎಂದರು.

ಅಧ್ಯಕ್ಷತೆಯನ್ನು ಸಿಂಡಿಕೇಟ್ ಬ್ಯಾಂಕ್ ಮಹಾಪ್ರಬಂಧಕ ರಮೇಶ್ ಪಿ.ಆರ್. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಜಿಲ್ಲಾ ಗವರ್ನರ್ ತಲ್ಲೂರು ಶಿವರಾಮ ಶೆಟ್ಟಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ುಮಾರ್ ಶೆಟ್ಟಿ ಶುಭ ಹಾರೈಸಿದರು.

ಅಜ್ಜರಕಾಡು ಸರಕಾರಿ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ, ಸಿಂಡಿಕೇಟ್ ಬ್ಯಾಂಕ್ ನೌಕರರ ಕೋ ಆರಪೇಟಿವ್ ಸೊಸೈಟಿ ಅಧ್ಯಕ್ಷ ಕೆ.ಬಾಲಗಂಗಾಧರ ರಾವ್, ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿ ಯೇಶನ್‌ನ ಕಾರ್ಯದರ್ಶಿ ವೈ.ಸುಧೀರ್ ಕುಮಾರ್, ಜೊತೆ ಕಾರ್ಯದರ್ಶಿ ಸೊಹೈಲ್ ಅಮೀನ್, ಕೋಶಾಧಿಕಾರಿ ಎಂ.ಕಾಶೀರಾಮ್ ಪೈ, ಸದಸ್ಯರಾದ ಹರೀಶ್ ಶೆಟ್ಟಿ, ಟೆರೆನ್ಸ್ ಸುವಾರಿಸ್, ಜಿಲ್ಲಾ ಬ್ಯಾಡ್ಮಿಂಟನ್ ತರಬೇತುದಾರ ವಿವೇಕ್ ಜಾನ್, ಪರ್ಕಳ ಲಯನ್ಸ್ ಕ್ಲಬ್ ಅಧ್ಯಕ್ಷ ಶಶಿಧರ್ ಶೆಟ್ಟಿ, ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಅಶೋಕ್ ಪಣಿಯಾಡಿ ಉಪಸ್ಥಿತರಿದ್ದರು.

ಮೇಜರ್ ರಾಧಾಕೃಷ್ಣ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪುರುಷರ ಹಾಗೂ 40 ವರ್ಷ ಮೇಲ್ಪಟ್ಟವರ ಡಬಲ್ಸ್, 17ವರ್ಷ ಕೆಳಗಿನ ಬಾಲಕ, ಬಾಲಕಿಯರ ಸಿಂಗಲ್ಸ್ ಮತ್ತು ಡಬಲ್ಸ್, 15, 13, 11ವರ್ಷ ಕೆಳಗಿನ ಬಾಲಕರ ಬಾಲಕಿಯರ ಸಿಂಗಲ್ಸ್ ವಿಭಾಗಳಲ್ಲಿ ನಡೆಯುವ ಈ ಪಂದ್ಯಾಟದಲ್ಲಿ 200ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News